ಬೆಂಗಳೂರು: ಚುಕ್ಕೆ ಜಿಂಕೆಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕೃಷ್ಣನದೊಡ್ಡಿಯಲ್ಲಿ ಚುಕ್ಕೆ ಜಿಂಕೆಗಳ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಡೊಮಿನಿಕ್ ರಾಜ್ ಎಂದು ಗುರುತಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸಿಡಿಆರ್ ತಂತ್ರಜ್ಞಾನದ ಸಹಾಯದಿಂದ ಆರೋಪಿಯ ಚಲನವಲನಗಳನ್ನು ಗಮನಿಸಿ ಬಂಧಿಸಲಾಗಿದೆ. ಜೂನ್ 29ರಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಚುಕ್ಕೆ ಜಿಂಕೆಗಳ ಬೇಟೆಯಾಡಕಾಗಿತ್ತು. ಪ್ರತಾಪ್ ಎಂಬಾತ ಸೇರಿ ಮೂವರನ್ನು ಬಂಧಿಸಿ 74 ಕೆಜಿ ಜಿಂಕೆ ಮಾಂಸ ವಶಕ್ಕೆ ಪಡೆಯಲಾಗಿತ್ತು. ಇದೀಗ ಒಟ್ಟು ಐವರನ್ನು ಬಂಧಿಸಲಾಗಿದೆ.