ದುಬೈ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮತ್ತೆ ಭರ್ಜರಿ ಜಯ ಗಳಿಸಿದೆ. ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ್ದ ಟೀಂ ಇಂಡಿಯಾ ಭಾನುವಾರ ನಡೆದ ಸೂಪರ್ -4 ಪಂದ್ಯದಲ್ಲಿ ಕೂಡ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
ಟಾಸ್ ವೇಳೆ ನಿರೀಕ್ಷೆಯಂತೆ ಪಾಕಿಸ್ತಾನ ನಾಯಕನ ಜೊತೆಗೆ ಹ್ಯಾಂಡ್ ಶೇಕ್ ಮಾಡಿದ ಸೂರ್ಯ ಕುಮಾರ್ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿತು. ಫರಾನ್ 58 ರನ್ ಗಳಿಸಿದರು. ಭಾರತ 18.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಅಭಿಷೇಕ್ ಶರ್ಮಾ 74, ಗಿಲ್ 47, ತಿಲಕ್ ಅಜೇಯ 30 ರನ್ ಗಳಿಸಿದರು.
ಪಾಕಿಸ್ತಾನ ವಿರುದ್ಧ ಭಾರತ ಜಯ ಗಳಿಸಿದ ಹಿನ್ನೆಲೆಯಲ್ಲಿ ಎಲ್ಲೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.