BREAKING : ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದ ಕಿಡಿಗೇಡಿ ಮಹಿಳೆ ಅರೆಸ್ಟ್.!

ಬೇಲೂರು : ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ನಿನ್ನೆ ಬೆಳಿಗ್ಗೆ ಕಿಡಿಗೇಡಿಗಳು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಸಾರ್ವಜನಿಕರು, ಭಕ್ತರು ದೇವಾಲಯದ ಬಳಿ ಪ್ರತಿಭಟನೆ ನಡೆಸಿದ್ದರು. ತಕ್ಷಣ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನ ಬಂಧಿಸಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿದ್ದ ಮಹಿಳೆಯೇ ಈ ಕೃತ್ಯ ಎಸಗಿದ್ದಾಳೆ. ಮುಖಮುಚ್ಚಿಕೊಂಡು ಬಂದಿದ್ದ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ದೇವರ ಮೇಲೆ ಇಟ್ಟಿರುವ ಅನುಮಾನವಿದೆ. ದೇವಸ್ಥಾನಕ್ಕೆ ಮಹಿಳೆ ಎಂಟ್ರಿ ಕೊಡುವಾಗ ಆಕೆ ಕಾಲಿನಲ್ಲಿ ಚಪ್ಪಲಿ ಇತ್ತು. ಆದರೆ ದೇವಸ್ಥಾನದಿಂದ ವಾಪಸ್ ಹೋಗುವಾಗ ಕಾಲಿನಲ್ಲಿ ಚಪ್ಪಲಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ನಂತರ ಪೊಲೀಸರು ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read