ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ನಲ್ಲಿ ಕಚೇರಿಗೆ ತೆರಳುತ್ತಿದ್ದ ವೇಳೆ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಕಲ್ಪನಾ (38) ಮೃತ ಮಹಿಳೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಪನಾ ಅವರನ್ನು ತಕ್ಷಣ ಕಣ್ವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಮೃತ ಕಲ್ಪನಾ ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಎಂದು ತಿಳಿದುಬಂದಿದೆ.