ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲಾಗಿದ್ದು, ಸದ್ಯ ಮಠಕ್ಕೆ ಬೀಗ ಹಾಕಲಾಗಿದೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹಲವು ಆರೋಪಗಳು, ಅಸಮಾಧಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ನಿನ್ನೆ ನಡೆದ ಪಂಚಮಸಾಲಿ ಮುಖಂಡರ ಸಮ್ಮುಖದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು. ಬಳಿಕ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ಬಳಿಕ ಪಂಚಮಸಾಲಿ ಮಠಕ್ಕೆ ಬೀಗ ಹಾಕಲಾಗಿದೆ. ಅಲ್ಲದೇ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಲವೆಡೆ ಆಸ್ತಿ ಮಾಡಿದ್ದಾರೆ. ಆವರ ವಿರುದ್ಧ ಗಂಭೀರ ಆರೋಪಗಳಿವೆ ಅವುಗಳನ್ನು ದಾಖಲೆ ಸಮೇತ ಪತ್ತೆ ಮಾಡುವುದಾಗಿ ಹಾಗೂ ಸ್ವಾಭಿಮಾನವಿದ್ದರೆ ಸ್ವಾಮಿಜಿ ಮತ್ತೆ ಮಠದತ್ತ ಬರದಂತೆ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯನಾಂದ ಕಾಶಪ್ಪನವರ್ ವಾಗ್ದಾಳಿ ನಡೆಸಿದ್ದಾರೆ.