215 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದುಗೊಳಿಸುವಂತೆ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಹಾಗೂ ಅರ್ಜಿಯನ್ನು ವಜಾಗೊಳಿಸಿದೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆರಂಭಿಸಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣವನ್ನು ಇಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಎಜಿ ಮಸಿಹ್ ಅವರ ಪೀಠ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ತನಗೆ ವಿನಾಯಿತಿ ನಿರಾಕರಿಸಿದ ದೆಹಲಿ ಹೈಕೋರ್ಟ್ ಜುಲೈ 3 ರ ಆದೇಶದ ವಿರುದ್ಧ ಫರ್ನಾಂಡೀಸ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣವನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ಅಧ್ಯಕ್ಷತೆಯ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು, ಅವರು ಜಾಕ್ವೆಲಿನ್ ಅವರ ಅರ್ಜಿಯನ್ನು ವಜಾಗೊಳಿಸಿದರು.
Actor Jacqueline Fernandez withdraws from Supreme Court her plea against a Delhi High Court order refusing to quash money laundering proceedings against her in the Rs 215-crore case involving alleged conman Sukesh Chandrashekhar.
— ANI (@ANI) September 22, 2025
Supreme Court says Fernandez can approach the… pic.twitter.com/10kM7Tpqun