BREAKING : ‘ಮೈಸೂರು ದಸರಾ’ ಪ್ರಯುಕ್ತ ವಿಶೇಷ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ CM ಸಿದ್ದರಾಮಯ್ಯ |Flower Show

ಮೈಸೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ದಸರಾ ಅಂಗವಾಗಿ ಆಯೋಜಿಸಿದ್ದ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.

ಇಂದು ಮೈಸೂರು ದಸರಾ ಅಂಗವಾಗಿ ಆಯೋಜಿಸಿದ್ದ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ, ಶುಭ ಹಾರೈಸಿದೆ ಎಂದು ಸಿಎಂ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ.

ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು. ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read