ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ.
ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ತನ್ನವಿರುದ್ಧದ ಎಫ್ ಐ ಆರ್ ರದ್ದು ಕೋರಿ ಜಾಕ್ವೆಲಿನ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ದೆಹಲಿ ಹೈಕೋರ್ಟ್ ಜಾಕ್ವೆಲಿನ್ ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾಕ್ವೆಲಿನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ನೀದಿರುವ ಆದೇಶದಲ್ಲಿ ಮಧ್ಯಪ್ರವೇಶ ಮಾಡಲ್ಲ. ವಿಚಾರಣೆ ಎದುರಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸಂಕಷ್ಟ ಎದುರಾಗಿದೆ.