ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ಹಿನ್ನೆಲೆಯಲ್ಲಿ ಆಹಾರ ಮೇಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಚಾಲನೆ ನೀಡಿದರು. ನಾಡ ದೇವಿ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಅರಮನೆ ನಗರಿ ಮೈಸೂರಿನಲ್ಲಿ ದಸರಾ ಮಹೋತ್ಸವ ಕಳೆಕಟ್ಟಿದ್ದು, ಎಲ್ಲೆಡೆ ಸಡಗರ-ಸಂಭ್ರಮ ಮನೆ ಮಾಡಿದೆ. ಒಂದೆಡೆ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ಆರಂಭವಾಗಿದೆ.
ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ, ದಸರಾ ಮಹೋತ್ಸವದ ಫಲ-ಪುಷ್ಪ ಪ್ರದೇಶನವನ್ನು ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ ಮಹಾರಾಜಾ ಕಾಲೇಜು ಮೈದಾನದಲ್ಲಿ ಆಹಾರ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಬಳಿಕ ಆಹಾರ ಮೇಳದ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಈ ವೇಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕರು ಸಿಎಂಗೆ ಸಾಥ್ ನೀಡಿದರು. ಇದೇ ವೇಳೆ ಆಹಾರ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ ಮೇಲುಕೋಟೆ ಪುಳಿಯೊಗರೆ ಸವಿದರು.