ಬೆಳಗಾವಿ: ವಿದ್ಯಾರ್ಥಿನಿಯೊಬ್ಬಳು ವಸತ ಶಾಲೆಯ ಹಾಸ್ಟೆಲ್ ನಲ್ಲಿಯೇ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಬೆಳಗಾವಿ ನಗರದ ಸದಾಶಿವ ನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಇಂದು ಬೆಳಿಗ್ಗೆ ಸಹಪಾಠಿ ಕೊಠಡಿಗೆ ಬಂದು ಬಾಗಿಲು ಬಡಿದಾಗ ಸುಮಿತ್ರಾ ಬಾಗಿಲು ತೆರೆದಿಲ್ಲ. ಸಹಪಾಠಿಯೇ ಬಾಗಿಲು ತೆರೆದು ನೋಡಿದಾಗ ಸುಮಿತ್ರಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.