ಮೈಸೂರು: ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮೇಳೈಸಿದೆ. ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್, ದಸರಾ ಉದ್ಘಾಟನೆ ನೆರವೇರಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲ-ಪುಷ್ಪ ಪ್ರದರ್ಶನ, ಆಹಾರ ಮೇಳ, ಕುಸ್ತಿ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಮೈಸೂರಿನ ಡಿ.ದೇವರಾಜ ಅರಸು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ, ಅಂಬಾ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದರು. ಈ ವೇಳೆ ಕುಸ್ತಿಪಟುಗಳಿಗೆ ಬೆನ್ನುತಟ್ಟಿ ಹುರಿದುಂಬಿಸಿದರು.
ಬಳಿಕ ಪಂದ್ಯಾವಳಿ ನಡೆಯುವ ಸ್ಥಳದ ಪಕ್ಕದಲ್ಲಿಯೇ ಕುಳಿತು ಕುಸ್ತಿ ಪಂದ್ಯವನ್ನು ವೀಕ್ಷಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕರಾದ ಡಿ.ರವಿಶಂಕರ್, ಶ್ರೀವತ್ಸ ಸಾಥ್ ನೀಡಿದರು.