ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸೈಬರ್ ವಂಚಕರ ಹಾವಳಿ ಹೆಚ್ಚಾಗುತ್ತಿದೆ. ಸಂಸದ ಸುಧಾಕರ್ ಪತ್ನಿ ಡಾ.ಪ್ರೀತಿ ಅವರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಲ್ಲಿ 14 ಲಕ್ಷ ದೋಚಿರುವ ಘಟನೆ ಬೆನ್ನಲ್ಲೇ ಇದೀಗ ಇನ್ಫೋಸಿಸ್ ಮುಖ್ಯಸ್ಥೆ , ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರಿಗೂ ಸೈಬರ್ ವಂಚಕರು ವಂಚಿಸಲು ಯತ್ನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸೆಪ್ಟೆಂಬರ್ 5ರಂದು ಸುಧಾಮೂರ್ತಿಯವರಿಗೆ ಕರೆ ಮಾಡಿರುವ ಸೈಬರ್ ವಂಚಕರು, ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿದ್ದಾರೆ. ಬಳಿಕ ನಿಮ್ಮ ಮೊಬೈಲ್ ನಂಬರ್ ಆಧಾರ್ ಲಿಂಕ್ ಗೆ ಲಿಂಕ್ ಮಾಡದೇ ನೊಂದಾಯಿಸಲಾಗಿದೆ. ನಿಮ್ಮ ನಂಬರ್ ನಿಂದ ಅಶ್ಲೀಲ ವಿಡಿಯೋ ಕಳುಹಿಸಲಾಗುತ್ತಿದ್ದು, ಅದನ್ನು ನಿಲ್ಲಿಸಲಾಗಿದೆ ಎಂದಿದ್ದಾರೆ. ಅಲ್ಲದೇ ವೈಯಕ್ತಿಕ ದಾಖಲೆಗಳನ್ನು ಕಲೆಹಾಕಲು ಯತ್ನಿಸಿದ್ದಾರೆ.
ಸುಧಾಮೂರ್ತಿ ವಂಚಕರ ಟ್ರ್ಯಾಪ್ ಗೆ ಒಳಗಾಗದೇ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಕ್ರೈಂ ಠಾಣೆಯಲ್ಲಿ ಸುಧಾಮೂರ್ತಿ ದೂರು ದಾಖಲಿಸಿದ್ದಾರೆ.