ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಆರ್.ವಿ, ರಸ್ತೆ -ಬೊಮ್ಮಸಂದ್ರ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ.
ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಬೊಮ್ಮಸಂದ್ರ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಆರ್.ವಿ. ರಸ್ತೆ ನಿಲ್ದಾಣದಲ್ಲಿ ಸಮಸ್ಯೆ ತೊಂದರೆ ಕಂಡು ಬಂದಿದೆ.
ಕಳೆದ ಎರಡು ನಿಮಿಷಗಳಿಂದ ನಿಲ್ದಾಣದಲ್ಲಿ ರೈಲು ನಿಂತಿದೆ.
ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.