HomeLatest NewsBIG NEWS: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ...

BIG NEWS: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಲಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದರು.

ಇನ್ನು ಸಿಎಂ ಕಪ್ ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದರು.

ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular