ನವದೆಹಲಿ: 1xBet ಬೆಟ್ಟಿಂಗ್ ಆ್ಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಪ್ ಪರ ಪ್ರಚಾರ ನಡೆಸಿದ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ ಅವರು ಸೋಮವಾರ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಉತ್ತಪ್ಪ ಅವರನ್ನು 8 ಗಂಟೆ ಕಾಲ ವಿಚಾರಣೆಗೊಳಪಡಿಸಲಾಗಿದ್ದು, ಬೆಟ್ಟಿಂಗ್ ಆ್ಯಪ್ ನಂಟು ಪ್ರಚಾರ ಸೇರಿ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಅವರೊಂದಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್, ನಟ ಸೋನು ಸೂದ್ ಅವರಿಗೂ ಇಡಿ ನೋಟಿಸ್ ನೀಡಿದ್ದು, ಅವರು ಕ್ರಮವಾಗಿ ಮಂಗಳವಾರ ಮತ್ತು ಬುಧವಾರ ವಿಚಾರಣೆ ಎದುರಿಸುವ ಸಾಧ್ಯತೆ ಇದೆ
ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆ ಕೈಗೊಂಡಿರುವ ಇಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ರಾಬಿನ್ ಉತ್ತಪ್ಪ ಸೋಮವಾರ ವಿಚಾರಣೆ ಎದುರಿಸಿದ್ದಾರೆ.