ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನೇರವಾಗಿ ಸಾಲ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಕ್ಟೋಬರ್.31 ರ ಒಳಗಾಗಿ www.ksbdb.Karnataka.gov.in ನಲ್ಲಿ ಅರ್ಜಿ ಸಲ್ಲಿಸ ಬಹುದಾಗಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಘಟಕ ವೆಚ್ಚ ಕನಿಷ್ಠ ರೂ.1 ಲಕ್ಷಕ್ಕೆ ರೂ.20,000 ಹಾಗೂ ಗರಿಷ್ಠ ರೂ.2 ಲಕ್ಷಕ್ಕೆ ರೂ.40,000 ವರೆಗೆ ಆರ್ಥಿಕವಾಗಿ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : +918029605888, +918762249230 ಗೆ ಸಂಪರ್ಕಿಸಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
You Might Also Like
TAGGED:ಕರ್ನಾಟಕ ಬ್ರಾಹ್ಮಣ