ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಶ್, ದೀಪಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದಿಂದ ಕೈ ಬಿಡುವಂತೆ ಆರೋಪಿಗಳಾದ ಪ್ರದೋಶ್, ದೀಪಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಟಿ ಸಿವಿಲ್ ಕೋರ್ಟ್ ಇಬ್ಬರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ & ಗ್ಯಾಂಗ್ ವಿರುದ್ಧ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿತ್ತು. ಕೊಲೆ ಆರೋಪಿ ನಟ ದರ್ಶನ್ ಮತ್ತು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದ ಬಳಿಕ ದರ್ಶನ್ & ಗ್ಯಾಂಗ್ ಮತ್ತೆ ಅರೆಸ್ಟ್ ಆಗಿತ್ತು.ಹೈಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್,. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದು ನ್ಯಾಯಮೂರ್ತಿ ಪರ್ದಿವಾಲಾ ಅಭಿಪ್ರಾಯಪಟ್ಟಿದ್ದರು.