ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಐವರು ಪೊಲೀಸರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣ ಸಂಬಂಧ ಈ ಆದೇಶ ಹೊರಡಿಸಲಾಗಿದೆ.
ಕೋರಮಂಗಲ ಠಾಣೆಯ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.
ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂಪಾಯಿ ವಸೂಲಿ ಆರೋಪದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಲಸೂರು ಗೇಟ್ ಠಾಣೆ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ, ಓರ್ವ ಎಸ್ ಎಸ್ ಐ ಸೇರಿ ಮೂವರನ್ನು ಅಮಾನತು ಮಾಡಲಾಗಿದೆ.
ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಲ್ಲಿ ಕೋರಮಂಗಲ ಠಾಣೆ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.