ನವದೆಹಲಿ: ಆನ್ ಲೈನ್ ಬೆಟ್ಟಿಂಗ್ ಹಗರಣ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ತಮ್ಮ ವಕೀಲರೊಂದಿಗೆ ಯುವರಾಜ್ ಸಿಂಗ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಯುವರಾಜ್ ಸಿಂಗ್ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇತ್ತೀಚೆಗೆ ಕ್ರಿಕೆಟಿಗ ರಾಬಿನ್ ಉತ್ತಪ್ಪ, ಬಾಲಿವುಡ್ ನಟ ಸೋನು ಸೂದ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ರಾಬಿನ್ ಉತ್ತಪ್ಪ ಸೋಮವಾರ ವಿಚಾರಣೆಗೆ ಹಾಜರಾಗಿದ್ದರು. ನಾಳೆ ನಟ ಸೋನು ಸೂದ್ ಅವರ ವಿಚಾರಣೆ ನಡೆಯಲಿದೆ.