ಮೈಸೂರು: ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಲ್ಲಿ ಸಹಕಾರ ಸಂಘ ಸ್ಥಾಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮೈಸೂರು ದಸರಾ ಅಂಗವಾಗಿ ಜಿಕೆ ಮೈದಾನದಲ್ಲಿ ಆಯೋಜಿಸಿದ್ದ ಮಹಿಳಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಎಂದರೆ ಸ್ವಾವಲಂಬನೆಯ ಪ್ರತೀಕ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ. ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿ ಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎನ್ನುವ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿಟ್ಟುಕೊಂಡು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ. ಕೋಟ್ಯಂತರ ಮಹಿಳೆಯರು ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯರಿಗೆ ಬ್ಯಾಂಕುಗಳಿಂದ ಸರಿಯಾಗಿ ಸಾಲ ಸಿಗುತ್ತಿಲ್ಲ. ಇದರಿಂದಾಗಿ ಅವರಿಗೆ ಜೀವನ ರೂಪಿಸಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪಿಸಲಿದ್ದು, ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಸ್ವಾವಲಂಬಿಗಳನ್ನಾಗಿ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ದಸರಾ- 2025 ರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
— Laxmi Hebbalkar (@laxmi_hebbalkar) September 23, 2025
ದಸರಾ ಕಾರ್ಯಕ್ರಮದಲ್ಲಿ ಅತ್ಯಂತ ಖುಷಿಯಿಂದ ಭಾಗವಹಿಸಿದ್ದೇನೆ, ವೈವಿಧ್ಯಮಯವಾಗಿ ನಡೆಯುವ ಈ ಮಹಿಳಾ ದಸರಾ ಕಾರ್ಯಕ್ರಮ ನಮ್ಮ ಮಹಿಳೆಯರು… pic.twitter.com/PKkfx2Dghp