ಬೆಂಗಳೂರು: ಭೂಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಸಮಗ್ರ ಪರಿಶೀಲನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025 ಅನ್ನು ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸದಸ್ಯರ ಕೋರಿಕೆ ಮೇರೆಗೆ ಸಮಗ್ರ ಪರಿಶೀಲನೆಗೆ ಪರಿಶೀಲನಾ ಸಮಿತಿ ರಚಿಸಿ ವರದಿ ನೀಡಲು ಸೂಚಿಸಲಾಗಿದೆ.
ಸದನದ ನಿರ್ಣಯದಂತೆ ವಿಧೇಯಕ ಪರಿಶೀಲಿಸಿ ವರದಿ ನೀಡಲು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರು ಕೃಷ್ಣಬೈರೇಗೌಡ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ವಿಧಾನಸಭೆ ಸದಸ್ಯರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಹೆಚ್.ವಿ. ವೆಂಕಟೇಶ್, ಡಾ. ಶ್ರೀನಿವಾಸ್ ಎನ್.ಟಿ., ಗಣೇಶ್, ಪ್ರಕಾಶ್ ಹುಕ್ಕೇರಿ, ಭೀಮಣ್ಣ ನಾಯ್ಕ, ಅರವಿಂದ ಬೆಲ್ಲದ, ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಎಂ.ಟಿ. ಕೃಷ್ಣಪ್ಪ ಅವರನ್ನು ಸದಸ್ಯರನ್ನಾಗಿ ನೇಮಿಸಿ ಸಮಿತಿ ರಚಿಸಲಾಗಿದೆ.
ಈ ಸಮಿತಿಗೆ ವರದಿ ನೀಡಲು ಮೂರು ತಿಂಗಳ ಕಾಲಾವಧಿ ನಿಗದಿಪಡಿಸಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.