ಬೆಂಗಳೂರು: ಗೊಂದಲದ ನಡುವೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿ ಕಾರ್ಯ ರಾಜ್ಯದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಈ ನಡುವೆ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ. ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆಯಲ್ಲಿ ಜನರ ಭಾಗಿ ಸ್ವಯಂಪ್ರೇರಿತ. ಮಾಹಿತಿ ನೀಡಲು ನಿರಾಕರಿಸಬಹುದು ಎಂದು ಸರ್ಕಾರ, ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ. ಸಮೀಕ್ಷೆಗೆ ತಡೆ ಕೋರಿದ ಅರ್ಜಿ ವಿಚಾರಣೆಯ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ.