HomeLatest Newsರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ 5 ದಿನ ‘ರಾಗಿ ಮಾಲ್ಟ್’...

ರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ 5 ದಿನ ‘ರಾಗಿ ಮಾಲ್ಟ್’ ವಿತರಣೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ ಐದು ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಕ್ಷೀರ ಭಾಗ್ಯ ಹಾಲಿನ ಜೊತೆಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿರುವ ಮಕ್ಕಳಿಗೆ ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನಿಂದ ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆಯ ಬಿಸಿ ಹಾಲಿನ ಜೊತೆಗೆ ಸಾಯಿ ಶ್ಯೂರ್ ಹೆಲ್ತ್ ಮಿಕ್ಸ್ ಪುಡಿ ವಿತರಿಸಲಾಗುತ್ತಿದೆ. ಇನ್ನು ವಾರದಲ್ಲಿ ಐದು ದಿನ ಸರ್ಕಾರಿ ಮತ್ತು ಅನುದಾನಿತ ಶಾಲೆ ಮಕ್ಕಳಿಗೆ ರಾಗಿಮಾಲ್ಟ್ ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular