ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸುಗಳ ಎರಡನೇ ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.
ಈ ಕೋರ್ಸುಗಳಿಗೆ ಇದುವರೆಗೆ 18,867 ಸೀಟು ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಾಹಿತಿ ನೀಡಿದೆ. ಎರಡು ಸುತ್ತುಗಳಿಂದ ವೈದ್ಯಕೀಯ ಕೋರ್ಸ್ ಗಳಿಗೆ 9958, ದಂತವೈದ್ಯಕೀಯ ಕೋರ್ಸ್ 2658, ಆಯುಷ್ ಕೋರ್ಸ್ ಗಳಿಗೆ 6257 ಸೀಟು ಹಂಚಿಕೆ ಮಾಡಲಾಗಿದೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಸೆಪ್ಟೆಂಬರ್ 26 ರ ವರೆಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 28ರ ವರೆಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.