ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ಗರ್ಭಿಣಿ ಎಂದು ತಿಳಿದು ಸಂತ್ರಸ್ತೆಯನ್ನು ಬಿಟ್ಟು ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ.
ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಈ ಬಗ್ಗೆ ದೂರು ನೀಡಿದ್ದಾರೆ. ವಿ. ಮ್ಯಾಥ್ಯೂ ಎಂಬುವವರು ಮದುವೆಯಾಗುವುದಾಗಿ ನಂಬಿಸಿದ್ದರು. ಹೀಗಾಗಿ ಕಳೆದ ಒಂದು ವರ್ಷದಿಂದ ನನ್ನ ಮನೆಯಲ್ಲಿಯೇ ಇಬ್ಬರು ಪತಿ-ಪತ್ನಿಯಾಗಿದ್ದೆವು. ಆದರೆ ನಾನು ಗರ್ಭಿಣಿ ಎಂದು ತಿಳಿದ ನಂತರ ನನ್ನ ಮೊಬೈಲ್, ವೈದ್ಯಕೀಯ ದಾಖಲೆ ತೆಗೆದುಕೊಂಡು ಮ್ಯಾಥ್ಯೂ ಮನೆ ಬಿಟ್ಟು ಹೋಗಿದ್ದಾನೆ ಎಂದು ಸಂತ್ರಸ್ತೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಅಧ್ಯಕ್ಷರು, ಜ್ಞಾನಭಾರತಿ ಠಾಣೆ ಪೊಲೀಸರು ಮತ್ತು ನೈರುತ್ಯ ವಿಭಾಗ ಉಪ ಪೊಲೀಸ್ ಆಯುಕ್ತರಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.