ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2026-27 ನೇ ಸಾಲಿನಲ್ಲಿ ಖಾಲಿ ಇರುವ 9 ಮತ್ತು 11 ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ.
ಪ್ರಸ್ತುತ 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 9ನೇ ತರಗತಿಗೂ ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 11 ನೇ ತರಗತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಇದರ ಲಾಭವನ್ನು ಪಡೆದುಕೊಳ್ಳಬಹುದು. ಆನ್ಲೈನ್ ಅರ್ಜಿ ಸಲ್ಲಿಸಲು 9ನೇ ತರಗತಿಗೆ https://cbseitms.nic.in/2025/nvsix-9 ಹಾಗೂ 11 ನೇ ತರಗತಿಗಾಗಿ https://cbseitms.nic.in/2025/nvsxi-11
ಹೆಚ್ಚಿನ ಮಾಹಿತಿಗೆ ನವೋದಯ ಶಾಲೆಯನ್ನು ಹಾಗೂ ದೂರವಾಣಿ ಸಂಖ್ಯೆ 9481426184, 9380802179 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.