BIG NEWS: ಕೆಪಿಸಿಎಲ್ ಸಹಾಯಕ ಇಂಜಿನಿಯರ್ ನೇಮಕಾತಿ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) 404 ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ನಾಲ್ಕು ತಿಂಗಳೊಳಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕೆಪಿಸಿಎಲ್ ಸಹಾಯಕ ಇಂಜಿನಿಯರ್(ಇಎ) ಮತ್ತು ಕಿರಿಯ ಇಂಜಿನಿಯರ್(ಜೆಇ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 2024ರ ಮೇ 8ರಂದು ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಮೇ 28 ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾ ಮಾಡಿದ್ದು, ಮರು ಪರೀಕ್ಷೆ ನಡೆಸಲು ಆದೇಶಿಸಿದೆ.

ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಮಾಹಿತಿ ಬಂದಿದ್ದು, ಈ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಿತ್ತು. ಈಗ ಯಾವ ಪ್ರಾಧಿಕಾರಕ್ಕೆ ಸೂಚಿಸಬಹುದೆಂದು ನೋಡುತ್ತೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ನೇಮಕಾತಿ ಅಧಿಸೂಚನೆಯಲ್ಲಿ ಇಲ್ಲದಿದ್ದರೂ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಸಂದರ್ಭದಲ್ಲಿ ಋಣಾತ್ಮಕ ಅಂಕ ಪದ್ಧತಿ ಅನುಸರಿಸಿದ್ದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ 4 ತಿಂಗಳೊಳಗೆ ಮರು ಪರೀಕ್ಷೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read