ಬೆಂಗಳೂರು : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಹೌದು, ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಭೈರತಿ ಬಸವರಾಜು ಸುಳ್ಳು ಹೇಳಿದ್ದಾರೆ. ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದೆ. ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿತ್ತು. ಹಾಗೂ ತನಿಖೆಗೆ ಸಹಕರಿಸಲು ಸೂಚಿಸಿತ್ತು.ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಪ್ರಮುಖ ಆರೋಪಿ ಜಗದೀಶ್ ನನ್ನು ಬಂಧಿಸಲಾಗಿತ್ತು.