ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಅ.1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರವು ಆರೋಗ್ಯ ಭದ್ರತೆ ಕಲ್ಪಿಸಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿ ಮಾಡಲಾಗುತ್ತಿದ್ದು, ಇದರಿಂದ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ನಗದು ರಹಿತ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

