ದುನಿಯಾ ಡಿಜಿಟಲ್ ಡೆಸ್ಕ್ : ಪದವೀಧರರಾಗಿದ್ದು, ಬ್ಯಾಂಕಿಂಗ್ ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯಸುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು KSOU ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ತರಬೇತಿಯು ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ. ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಸೆ. 30 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಕುಲಸಚಿವ ಪ್ರೊ. ನವೀನ್ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944/9964760090ನ ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
You Might Also Like
TAGGED:ಬ್ಯಾಂಕಿಂಗ್