BREAKING : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನಕ್ಕೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಸಂತಾಪ.!

ಬೆಂಗಳೂರು : ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎಸ್.ಎಸ್ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.

ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಇಹದ “ಯಾನ” ಅಂತ್ಯ.. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read