ಬೆಂಗಳೂರು: ಸಾಹಿತಿ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಲ್. ಭೈರಪ್ಪ(94) ಇಂದು 24ರಂದು ನಿಧನರಾಗಿದ್ದು, ರಾಜ್ಯ ಸರ್ಕಾರವು ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲು ಅಧಿಕೃತ ಆದೇಶ ಪ್ರಕಟಿಸಿದೆ.
ಗುರುವಾರ ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್.ಎಲ್. ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ನಂತರ ಮೈಸೂರಿಗೆ ಪಾರ್ಥಿವ ಶರೀರ ಕೊಂಡೊಯ್ಯಲಿದ್ದು, ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಭೈರಪ್ಪ ಅಂತ್ಯಕ್ರಿಯೆ ನೆರವೇರಿಸಲು ಸರ್ಕಾರದ ವತಿಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.
