ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿದ್ದ ಅನೇಕ ನಿಗಮ, ಮಂಡಳಿ, ಆಯೋಗಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ.
ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ, ಮಾಜಿ ಶಾಸಕ ಎನ್. ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗಾ ಸುಲ್ತಾನ್ ಸೇರಿದಂತೆ 39 ಮಂದಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ- ಸಿ.ರಘು, ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ- ಅರುಣ್ ಪಾಟೀಲ್, ಜೀವ ವೈವಿಧ್ಯತೆ ಮಂಡಳಿ-ವಡ್ನಾಳ್ ಜಗದೀಶ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ-ಮುರಳಿ ಅಶೋಕ್, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪಂಗಡಗಳ ಆಯೋಗ-ಡಾ. ಮೂರ್ತಿ,
ಮಾಜಿ ಸೈನಿಕರ ಕಲ್ಯಾಣ ಮಂಡಳಿ ಮಲ್ಲಿಕಾರ್ಜುನ್, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ-ಡಾ.ಬಿ.ಸಿ. ಮುದ್ದುಗಂಗಾಧರ್, ಕರ್ನಾಟಕ ಇಕೋ ಟೂರಿಸಂ ಅಭಿವೃದ್ಧಿ ಮಂಡಳಿ-ಶಾರ್ಲೆಟ್ ಪಿಂಟೋ, ಕರ್ನಾಟಕ ಸಮುದಾಯಗಳ ಮರಾಠ ಅಭಿವೃದ್ಧಿ ನಿಗಮ- ಮರಿಯೋಜಿ ರಾವ್, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ- ಕೆ. ಹರೀಶ್ ಕುಮಾರ್, ಕಾಡುಗೊಲ್ಲ ಅಭಿವೃದ್ಧಿ ನಿಗಮ-ಮಹೇಶ್, ಬಯಲುಸೀಮೆ ಅಭಿವೃದ್ಧಿ ಮಂಡಳಿ ಚಿತ್ರದುರ್ಗ- ಮಂಜಪ್ಪ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ- ದರಮಣ್ಣ ಉಪ್ಪಾರ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ- ಅಂಜನಪ್ಪ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- ನೀಲಕಂಠ ಮುಳ್ಳೆ, ಕಮಾಂಡ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕಲಬುರ್ಗಿ-ಬಾಬು ಹೊನ್ನಾ ನಾಯಕ್, ಮಲಪ್ರಭ ಮತ್ತು ಘಟಪ್ರಭ ಯೋಜನೆ ಕಮಾಂಡ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಳಗಾವಿ-ಯುವರಾಜ್ ಕದಂ, ಕರ್ನಾಟಕ ತೊಗರಿ ಬೇಳೆ ಅಭಿವೃದ್ಧಿ ನಿಗಮ- ಅನಿಲ್‌ಕುಮಾರ್
ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ- ಪ್ರವೀಣ್ ಹಾರ್ವಾಳ್, ನಾರಾಯಣ ಗುರು ಅಭಿವೃದ್ಧಿ ನಿಗಮ-ಮಂಜುನಾಥ್ ಪೂಜಾರಿ, ಕರ್ನಾಟಕ ರಾಜ್ಯ ಧಾನ್ಯಗಳ ಅಭಿವೃದ್ಧಿ ಮಂಡಳಿ- ಸಯ್ಯದ್ ಮೆಹ್ಮದ್ ಕಿಸ್ಟಿ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ- ಎಂ.ಎಸ್. ಮುತ್ತು ರಾಜ್, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ-ನಂಜಪ್ಪ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ- ವಿಶ್ವಾಸ್ ದಾಸ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ- ಆರ್. ಸತ್ಯನಾರಾಯಣ, ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ- ಗಂಗಾಧರ್, ಹಾಸನ ನಗರಾಭಿವೃದ್ಧಿ ಪ್ರಾಧಿಕಾರ- ಶಿವಪ್ಪ, ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿ- ಬಿ.ಎಸ್. ಕಾವಲಗಿ, ಕುಂಬಾರ ಅಭಿವೃದ್ಧಿ ನಿಗಮ- ಡಾ.ಶ್ರೀನಿವಾಸ ವೇಲು, ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ- ಟಿ.ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ- ಚೇತನ್ ಕೆ. ಗೌಡ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ಮಂಡಳಿ-ಶರಣಪ್ಪ ಸಲಾದ್‌ಪುರ್.