HomeLatest Newsವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಸಂದೇಶ ಅನುವಾದ ಹೊಸ ಫೀಚರ್ ಲಭ್ಯ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಸಂದೇಶ ಅನುವಾದ ಹೊಸ ಫೀಚರ್ ಲಭ್ಯ

ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣ ವಾಟ್ಸಾಪ್ ಸಂದೇಶ ಅನುವಾದದ ಹೊಸ ಫೀಚರ್ ಪರಿಚಯಿಸಿದೆ. ಸಂದೇಶವನ್ನು ನಾವು ಬಯಸುವ ಭಾಷೆಗೆ ಅನುವಾದಿಸುವ ಹೊಸ ಫೀಚರ್ ಪರಿಚಯಿಸಲಾಗಿದೆ. ಯಾರಿಗಾದರೂ ನೀವು ಹಿಂದಿಯಲ್ಲಿ ಅಥವಾ ಇಂಗ್ಲೀಷ್ ನಲ್ಲಿ ಸಂದೇಶ ಕಳುಹಿಸಬೇಕೆಂದರೆ ಮೊದಲು ಅದನ್ನು ಕನ್ನಡದಲ್ಲಿ ಟೈಪ್ ಮಾಡಬೇಕು. ಬಳಿಕ ಸಂದೇಶವನ್ನು ದೀರ್ಘವಾಗಿ ಒತ್ತಿ ಹಿಡಿಯಬೇಕು. ಆಗ ಕಾಣಿಸುವ ಟ್ರಾನ್ಸ್ಲೇಟ್ ಒತ್ತಬೇಕು. ಅಲ್ಲಿ ತೋರಿಸುವ ಭಾಷೆಗಳ ಪಟ್ಟಿಯಲ್ಲಿ ಹಿಂದಿ ಅಥವಾ ಇಂಗ್ಲಿಷ್ ಆಯ್ಕೆ ಮಾಡಿ ಸಂದೇಶವನ್ನು ಕಳುಹಿಸಬಹುದು.

ಇದನ್ನು ಖಾಸಗಿಯಾಗಿ ಅಥವಾ ಗ್ರೂಪ್ ಚಾಟ್ ನಲ್ಲಿಯೂ ಬಳಸಿಕೊಳ್ಳಬಹುದಾಗಿದೆ. ಪ್ರಸ್ತುತ ಆಂಡ್ರಾಯ್ಡ್ ನಲ್ಲಿ ಹಿಂದಿ ಸೇರಿದಂತೆ 7 ಭಾಷೆಗಳಲ್ಲಿ ಅನುವಾದವಿದೆ. ಐಫೋನ್ ನಲ್ಲಿ 19 ಭಾಷೆಗಳಿಗೆ ತರ್ಜುಮೆ ಮಾಡಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular