GOOD NEWS :ಅಲ್ಪಸಂಖ್ಯಾತರ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಜಿಲ್ಲಾದ್ಯಂತ ವಾಸವಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ 2025-26ನೇ ಸಾಲಿನಲ್ಲಿ ಈ ಕೆಳಕಂಡ ವಿವಿಧ ಯೋಜನೆಗಳಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-10-2025 ಆಗಿರುತ್ತದೆ.ವೃತ್ತಿ ಪ್ರೋತ್ಸಾಹ ಯೋಜನೆ: ಈ ಯೋಜನೆಯಡಿ 1,00,000/- ರೂ.ಗಳ ಸಾಲ ಮತ್ತು ಸಹಾಯಧನ ನೀಡಲಾಗುವುದು. (ಈ ಮೊತ್ತದಲ್ಲಿ ಶೇ.50 ರಷ್ಟು ಸಾಲ ಹಾಗೂ ಶೇ.50 ರಷ್ಟು ಸಹಾಯಧನ), ಶ್ರಮಶಕ್ತಿ ಸಾಲ ಹಾಗೂ ಸಹಾಯಧನ ಯೋಜನೆ: ಈ ಯೋಜನೆಯಡಿ 50,000/- ರೂ.ಗಳ ಸಾಲ ಮತ್ತು ಸಹಾಯಧನ ನೀಡಲಾಗುವುದು. (ಈ ಮೊತ್ತದಲ್ಲಿ ಶೇ.50 ರಷ್ಟು ಸಾಲ ಹಾಗೂ ಶೇ.50 ರಷ್ಟು ಸಹಾಯಧನ)

ಸ್ವಾವಲಂಬಿ ಸಾರಥಿ ಯೋಜನೆ: ಈ ಯೋಜನೆಯಡಿ ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್/ ಶೆಡ್ಯೂಲ್ ಬ್ಯಾಂಕ್/ ಆರ್.ಬಿ.ಐ ನಿಂದ ಮಾನ್ಯತೆ ಪಡೆದಿರುವ ವಿವಿಧ ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ನಿಗಮದ ವತಿಯಿಂದ ವಾಹನದ ಮೌಲ್ಯದ ಶೇ.50 ರಷ್ಟು ಸಹಾಯಧನ ಗರಿಷ್ಠ 3 ಲಕ್ಷಗಳವರೆಗೆ ಮತ್ತು ಪ್ಯಾಸೆಂಜರ್ ಆಟೋರಿಕ್ಷಾ ವಾಹನ ಖರೀದಿಸಲು ಗರಿಷ್ಠ ರೂ. 75,000/-ಗಳ ಸಹಾಯಧನವನ್ನು ನೀಡಲಾಗುವುದು.

ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ: ಈ ಯೋಜನೆಯಲ್ಲಿ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಾಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ವಿದ್ಯಾಭ್ಯಾಸ ಪಡೆಯಲು ರೂ.20 ಲಕ್ಷವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಸಾಲವನ್ನು ಒದಗಿಸಲಾಗುವುದು.

ವ್ಯಾಪಾರ/ಉದ್ದಿಮೆ ನೇರಸಾಲ ಯೋಜನೆ : ಈ ಯೋಜನೆಯಡಿಯಲ್ಲಿ ವ್ಯಾಪಾರ/ಉದ್ದಿಮೆ ಚಟುವಟಿಕೆ ಕೈಗೊಳ್ಳಲು ಫಲಾನುಭವಿಗಳ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಮಾತ್ರ ಗರಿಷ್ಠ 20 ಲಕ್ಷದವರೆಗೆ ಸಾಲವನ್ನು ಒದಗಿಸಲಾಗುವುದು.

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಶಾಹ : ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ನಿಗಮದ ವತಿಯಿಂದ 2 ಲಕ್ಷ÷ಗಳ ವರೆಗೆ ಸಾಲ ಮತ್ತು ಸಹಾಯಧನ ನೀಡಲಾಗುವುದು. (ಈ ಮೊತ್ತದಲ್ಲಿ ಶೇ.50 ರಷ್ಟು ಸಾಲ ಹಾಗೂ ಶೇ.50 ರಷ್ಟು ಸಹಾಯಧನ)

ಸಾಂತ್ವನ ಯೋಜನೆ: ರಾಜ್ಯದಲ್ಲಿ ಕೋಮು ಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ ರೂ. 2 ಲಕ್ಷ ನಷ್ಟವಾಗಿದ್ದರೆ ಅಂತಹ ಅಲ್ಪಸಂಖ್ಯಾತ ಸಮುದಾಯದ ವಿಶೇಷ/ದುರ್ಬಲ ವರ್ಗದ ಫಲಾನುಭವಿಗಳಿಗೆ ಗರಿಷ್ಠ 5 ಲಕ್ಷ ರೂ.ಗಳ ಘಟಕ ವೆಚ್ಚದಲ್ಲಿ ಶೇ. 50 ರಷ್ಟು ಸಹಾಯಧನ ಮತ್ತು ಶೇ. 50 ರಷ್ಟು ಸಾಲ ಸೌಲಭ್ಯ ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ) ಮೌಲಾನಾ ಆಜಾದ್ ಭವನ, 1ನೇ ಮಹಡಿ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಶ್ರೀ ವಿದ್ಯಾ ಗಣಪತಿ ಅಡ್ಡರಸ್ತೆ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ-573202 ಹಾಗೂ ದೂರವಾಣಿ ಸಂಖ್ಯೆ: 08172-246333ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read