HomeLatest Newsನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 'CCTV' ಕ್ಯಾಮೆರಾ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘CCTV’ ಕ್ಯಾಮೆರಾ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಅಕ್ಟೋಬರ್ 06, 2025 ರಿಂದ 13 ದಿನಗಳ ಉಚಿತ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವೀಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30, 2025 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9241482541, 9740982585, 9113880324 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಶಾಖೆ, ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular