BIG NEWS: ಎಲ್ಲಾ ಅಧಿಕಾರಿ, ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ: ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರದ ‘ಸಿ’ ವೃಂದದ ಮೇಲ್ಪಟ್ಟ ಎಲ್ಲಾ ಅಧಿಕಾರಿಗಳು, ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಸಂಬಂಧ ನಿಯಮಾವಳಿಯ ಅಂತಿಮಗೊಳಿಸಲಾಗಿದ್ದು, ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಇಂತಿವೆ..

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ.

ಉನ್ನತ ಶಿಕ್ಷಣ ಇಲಾಖೆಯಡಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2 ನೇ ಆವೃತ್ತಿ (UUCMS-V-2.0) ಯನ್ನು ರೂ.40.29 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ 110 ಜಂಕ್ಷನ್ ಗಳಲ್ಲಿ ಬೆಂಗಳೂರು ನಗರಕ್ಕೆ ಅವಶ್ಯಕವಿರುವ ಟ್ರಾಫಿಕ್ ಸಿಗ್ನಲ್ ಗಳನ್ನು ರೂ. 56.45 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ನಿರ್ಧಾರ.

ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ-2025-32ಕ್ಕೆ ಅನುಮೋದನೆ.

ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ರೂ.95.60 ಕೋಟಿಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಅನುಮೋದನೆ.

PM-ABHIM & RE-APPROPRIATE ANTICIPATED SAVING BUDGET DURING 2021-26 ថ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಿರ್ಮಿಸಲು ಮಂಜೂರಾಗಿರುವ 50 ಹಾಸಿಗೆಗಳ ತೀವ್ರ ನಿಘಾ ಆರೈಕೆ ಘಟಕವನ್ನು (CCB) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿ, ಅಂದಾಜು ಮೊತ್ತ ರೂ.23.75 ಕೋಟಿಗಳಲ್ಲಿ (ಕಟ್ಟಡ + ವೈದ್ಯಕೀಯ ಉಪಕರಣ) ನಿರ್ಮಿಸಲು ಅನುಮೋದನೆ.

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು ರೂ.16 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ.

“ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಯ ರೂ.128.74 ಕೋಟಿಗಳ ಪರಿಷ್ಕೃತ ಡಿಪಿಆರ್‌ಗೆ ಆಡಳಿತಾತ್ಮಕ ಅನುಮೋದನೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐ.ಆ‌ರ್.ಬಿ ಪಡೆಗಳಿಗೆ ಅವಶ್ಯಕವಿರುವ ಮೂಲಭೂತ ವಸತಿ/ವಸತಿಯೇತರ ಸೌಕರ್ಯಗಳನ್ನು ರೂ.60 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಲ್ಪಿಸಲು ನಿರ್ಧಾರ.

ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್, ಬೆಂಗಳೂರು ಸಂಸ್ಥೆಗೆ ಅವಶ್ಯವಿರುವ ರೋಬೋಟಿಕ್ ವೈದ್ಯಕೀಯ ಉಪಕರಣವನ್ನು ರೂ.20 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read