ಮೈಸೂರು: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ(94) ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ನೆರವೇರಲಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಗುರುವಾರ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿದೆ.
ಶುಕ್ರವಾರ ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.