ದುಬೈ: ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಫೈನಲ್ ಪ್ರವೇಶಿಸಿದೆ.
ಸೆಪ್ಟೆಂಬರ್ 28ರಂದು ಫೈನಲ್ ನಲ್ಲಿ ಭಾರತ -ಪಾಕಿಸ್ತಾನ ಮತ್ತೆ ಮುಖಾಮುಖಿಯಾಗಲಿದೆ. ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ 11 ಗಳಿಂದ ಜಯಗಳಿಸಿ ಫೈನಲ್ ಪ್ರವೇಶಿಸಿದೆ.
ಪಾಕಿಸ್ತಾನ ತಂಡ 135/8(20), ಬಾಂಗ್ಲಾ ತಂಡ 124/9(20) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಜಯಗಳಿಸಿದೆ. ಏಷ್ಯಾ ಕಪ್ ನಲ್ಲಿ ಮೊದಲ ಬಾರಿಗೆ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈಗಾಗಲೇ ಟೂರ್ನಿಯಲ್ಲಿ ಎರಡು ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಜಯಗಳಿಸಿದೆ. ಸೆ. 28ರಂದು ನಡೆಯಲಿರುವ ಫೈನಲ್ ನಲ್ಲೂ ಪಾಕಿಸ್ತಾನವನ್ನು ಬಗ್ಗು ಬಡಿಯುವ ವಿಶ್ವಾಸದಲ್ಲಿದೆ.