ನವದೆಹಲಿ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಿರ್ದೇಶನದ ವೆಬ್ ಸರಣಿಯೊಂದರಲ್ಲಿ ತಮ್ಮ ಪಾತ್ರವನ್ನು ಅತ್ಯಂತ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಎರಡು ಕೋಟಿ ರೂಪಾಯಿ ಪರಿಹಾರ ಕೋರಿ ಶಾರುಖ್ ಖಾನ್ ಮತ್ತು ಅವರ ಒಡೆತನದ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಸಮೀರ್ ವಾಂಕೆಡೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರವಾಗುತ್ತಿರುವ ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯಲ್ಲಿ ತಮ್ಮ ಪಾತ್ರವನ್ನು ದುರುದ್ದೇಶಪೂರಿತವಾಗಿ ಅತ್ಯಂತ ಕೆಟ್ಟದಾಗಿ ಬಿಂಬಿಸಲಾಗಿದ್ದು, ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಶಾರುಖ್ ಖಾನ್ ಮತ್ತು ಅವರ ಒಡೆತನದ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ಎರಡು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಸಮೀರ್ ಮನವಿ ಮಾಡಿದ್ದಾರೆ. ಈ ಹಣವನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಗೆ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಮೀರ್ ವಾಂಖೆಡೆ ಅವರು ವಿಚಾರಣೆ ನಡೆಸಿದ್ದರು. ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ನೆಟ್ ಫ್ಲಿಕ್ಸ್ ನಲ್ಲಿ ಸೆ. 18ರಿಂದ ಪ್ರಸಾರವಾಗುತ್ತಿದ್ದು, ಸದ್ದು ಮಾಡುತ್ತಿದೆ.