HomeLatest NewsBIG NEWS : 'CM ಸಿದ್ದರಾಮಯ್ಯ' ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ಹೀಗಿದೆ.!

BIG NEWS : ‘CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ಹೀಗಿದೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಹೀಗಿದೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು.!

* ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ

*ಉನ್ನತ ಶಿಕ್ಷಣ ಇಲಾಖೆಯಡಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2 ನೇ ಆವೃತ್ತಿ (UUCMS-V-2.0) ಯನ್ನು ರೂ.40.29 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ 110 ಜಂಕ್ಷನ್ ಗಳಲ್ಲಿ ಬೆಂಗಳೂರು ನಗರಕ್ಕೆ ಅವಶ್ಯಕವಿರುವ ಟ್ರಾಫಿಕ್ ಸಿಗ್ನಲ್ ಗಳನ್ನು ರೂ. 56.45 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ನಿರ್ಧಾರ
ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ-2025-32ಕ್ಕೆ ಅನುಮೋದನೆ.

*ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ರೂ.95.60 ಕೋಟಿಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಅನುಮೋದನೆ.

*PM-ABHIM & RE-APPROPRIATE ANTICIPATED SAVING BUDGET DURING 2021-26 ថ໖ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಿರ್ಮಿಸಲು ಮಂಜೂರಾಗಿರುವ 50 ಹಾಸಿಗೆಗಳ ತೀವ್ರ ನಿಘಾ ಆರೈಕೆ ಘಟಕವನ್ನು (CCB) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿ, ಅಂದಾಜು ಮೊತ್ತ ರೂ.23.75 ಕೋಟಿಗಳಲ್ಲಿ (ಕಟ್ಟಡ + ವೈದ್ಯಕೀಯ ಉಪಕರಣ) ನಿರ್ಮಿಸಲು ಅನುಮೋದನೆ.

*ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

*ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC PIPE) ರೈಸಿಂಗ್ ಮೇನ್ ಸೇರಿ ರಾಜಕಾಲುವೆಯ ಬಳಿಯ USED WATER TREATMENT PLANT ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್, ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 ಎಂಎಲ್ಡಿ ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರೂ.45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (INTERMEDIATE SEWAGE PUMPING STATION) ಮತ್ತು ಸುಮಾರು 3.5 ಕಿ.ಮೀಗಳ 450MM DIA DI (DUCTILE IRON) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (0&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.23.36 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

*ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಹೊರಮಾವುನಲ್ಲಿರುವ 20 MLD ಬಳಸಿದ ನೀರು ಸಂಸ್ಕರಣಾ ಘಟಕವನ್ನು (UWTP) 05 ವರ್ಷಗಳ ಅವಧಿಗೆ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಕೋಟಿಗಳ ಅನುಮೋದನೆ.

*ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7) ಅವಕಾಶದಡಿ 1,200 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ.

*ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಿಪಿಪಿ ಮಾದರಿಯಲ್ಲಿ ಪ್ರತಿನಿತ್ಯ 1,750 ಮೆ. ಟನ್ ಕಟ್ಟಡಗಳ ಹಾಗೂ ನಿರ್ಮಾಣ ಸಾಮಗ್ರಿಗಳ ಭಗ್ನಾವಶೇಷ ತ್ಯಾಜ್ಯದ ಸಂಗ್ರಹಣೆ ಮತ್ತು ವಿಲೇವಾರಿ ಮಾಡುವ (750 ಟಿಪಿಡಿಯ ಒಂದು ಪ್ಯಾಕೇಜ್ ಹಾಗೂ 500 ಟಿಪಿಡಿಯ ಎರಡು ಪ್ಯಾಕೇಜ್) ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಟೆಂಡರ್ ಅನುಮೋದನೆ.

*ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲು ನಿರ್ಧಾರ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular