ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಫರ್ನಿಚರ್ ಅಂಗಡಿಯೊಂದರಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ವಸ್ತುಗಳು, ಪೀಠೋಪಕರಣಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಹಬ್ಬದ ಸಂದರ್ಭದಲ್ಲಿಯೇ ಈ ಅವಘಡ ಸಂಭವಿಸಿದೆ. ಮಲ್ಲೇಶ್ವರಂನಲ್ಲಿರುವ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಪೀಠೋಪಕರಣ, ಮರದ ವಸ್ತುಗಳು ಸುಟ್ಟು ಕರಕಲಾಗಿವೆ. ಲಕ್ಷ ಲಕ್ಷ ನಷ್ಟವುಂಟಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.