ಮೈಸೂರು : ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಿತಾಗಾರದಲ್ಲಿ ನೆರವೇರಿತು. ಈ ಮೂಲಕ ಪಂಚಭೂತಗಳಲ್ಲಿ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಲೀನರಾಗಿದ್ದಾರೆ.
ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ(94) ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ. ಈ ಸಂದರ್ಭದಲ್ಲಿ ಎಸ್.ಎಸ್ ಭೈರಪ್ಪನವರ ಕುಟುಂಬಸ್ಥರು. ಸ್ನೇಹಿತರು ಸೇರಿದಂತೆ ಹಲವು ರಾಜಕೀಯ ಗಣ್ಯರು ನೆರೆದಿದ್ದರು.ಅಗಲಿದ ಸಾಹಿತಿಗೆ ಪೊಲೀಸರು 3 ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸಲ್ಲಿಸಿದರು.
ಗುರುವಾರ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ
ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಎಸ್.ಎಲ್ ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಸ್.ಎಲ್.ಬೈರಪ್ಪ ಅವರು ತಮ್ಮ ಬಹುಪಾಲು ಬದುಕನ್ನು ಮೈಸೂರಿನಲ್ಲಿ ಕಳೆದಿದ್ದರು. ಈ ಕಾರಣದಿಂದಾಗಿ ಮೈಸೂರಿನಲ್ಲಿಯೇ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಎಸ್.ಎಲ್.ಬೈರಪ್ಪ ಅವರು ತಮ್ಮ ಬಹುಪಾಲು ಬದುಕನ್ನು ಮೈಸೂರಿನಲ್ಲಿ ಕಳೆದಿದ್ದರು. ಈ ಕಾರಣದಿಂದಾಗಿ ಮೈಸೂರಿನಲ್ಲಿಯೇ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. #slbyrappa pic.twitter.com/d6hNkFDeng
— Siddaramaiah (@siddaramaiah) September 25, 2025