BREAKING : ಬದುಕಿನ ‘ಯಾನ’ ಮುಗಿಸಿದ ಹಿರಿಯ ಸಾಹಿತಿ ‘ಎಸ್.ಎಲ್ ಭೈರಪ್ಪ’ ಪಂಚಭೂತಗಳಲ್ಲಿ ಲೀನ.!

ಮೈಸೂರು : ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೆರವೇರಿತು. ಈ ಮೂಲಕ   ಪಂಚಭೂತಗಳಲ್ಲಿ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಲೀನರಾಗಿದ್ದಾರೆ.

ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ(94) ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ .ಅಗಲಿದ ಸಾಹಿತಿಗೆ ಪೊಲೀಸರು 3 ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸಲ್ಲಿಸಿದರು.

ಗುರುವಾರ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ( ಎಸ್.ಎಲ್ ಭೈರಪ್ಪ) ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಜೀವನ
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ೨೬-೦೭-೧೯೩೪ ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ ೨೦-೦೮-೧೯೩೧ ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ.

ಅವರ ೫ನೇ ವಯಸ್ಸಿನಲ್ಲಿ ಅವರ ತಾಯಿ ಬಡತನ – ಪ್ಲೇಗ್ ಗಳಿಗೆ ಜೀವವನ್ನು ತೆತ್ತಾಗ ಬದುಕಿನ ವಿಶ್ವ ವಿಶಾಲತೆಯ ರಂಗದಲ್ಲಿ ಸಾಹಸಮಯವಾದ ಬದುಕನ್ನು ತಾವೇ ನಿರ್ಮಿಸಿ ಕೊಳ್ಳ ತೊಡಗಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರು. ಗಾಂಧೀಜಿಯವರ ಮೌಲ್ಯಗಳಿಗೆ ಬೆಲೆ ಕೊಟ್ಟು ಸ್ವಾತಂತ್ರ ಚಳುವಳಿಗೆ ತೊಡಗಿಸಿಕೊಂಡಾಗ ಅವರಿಗೆ ಕೇವಲ ೧೩ ವರ್ಷ

ಪ್ರೌಢ ಶಿಕ್ಷಣ ಹಾಗೂ ಕಾಲೇಜು

ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.

ಕಾದಂಬರಿಗಳು

  1. ಭೀಮಕಾಯ
  2. ಬೆಳಕು ಮೂಡಿತು
  3. ಧರ್ಮಶ್ರೀ – (೧೯೬೧)
  4. ದೂರ ಸರಿದರು- (೧೯೬೨)
  5. ಮತದಾನ – (೧೯೬೫)
  6. ವಂಶವೃಕ್ಷ- (೧೯೬೫)
  7. ಜಲಪಾತ (ಕಾದಂಬರಿ)- (೧೯೬೭)
  8. ನಾಯಿ ನೆರಳು- (೧೯೬೮)
  9. ತಬ್ಬಲಿಯು ನೀನಾದೆ ಮಗನೆ-(೧೯೬೮)
  10. ಗೃಹಭಂಗ-(೧೯೭೦)
  11. ನಿರಾಕರಣ-(೧೯೭೧)
  12. ಗ್ರಹಣ-(೧೯೭೨)
  13. ದಾಟು -(೧೯೭೩)
  14. ಅನ್ವೇಷಣ-(೧೯೭೬)
  15. ಪರ್ವ-(೧೯೭೯)
  16. ನೆಲೆ -(೧೯೮೩)
  17. ಸಾಕ್ಷಿ -(೧೯೮೬)
  18. ಅಂಚು-(೧೯೯೦)
  19. ತಂತು -(೧೯೯೩)
  20. ಸಾರ್ಥ-(೧೯೯೮)
  21. ಮಂದ್ರ-(೨೦೦೧)
  22. ಆವರಣ-(೨೦೦೭)
  23. ಕವಲು – (೨೦೧೦)
  24. ಯಾನ – (೨೦೧೪)
  25. ಉತ್ತರಕಾಂಡ-(೨೦೧೭)

ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಎಸ್.ಎಲ್ ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಸ್.ಎಲ್.ಬೈರಪ್ಪ ಅವರು ತಮ್ಮ ಬಹುಪಾಲು ಬದುಕನ್ನು ಮೈಸೂರಿನಲ್ಲಿ ಕಳೆದಿದ್ದರು. ಈ ಕಾರಣದಿಂದಾಗಿ ಮೈಸೂರಿನಲ್ಲಿಯೇ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.


Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read