ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು, ಇದರಿಂದ ಸತ್ಯವೇನೆಂಬುದು ಹೊರಬರುತ್ತಿದೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ವೀರೇಂದ್ರ ಹೆಗ್ಗಡೆ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, ಎಸ್ ಐಟಿ ತನಿಖೆಯಿಂದ ಸತ್ಯ ಹೊರಬರುತ್ತಿದೆ. ಎಸ್ ಐಟಿ ಅರ್ಧದಷ್ಟು ವರದಿ ಬಂದಿರುವುದರಿಂದ ನಾನು ದೈರ್ಯವಾಗಿ ಇಂದು ಮಾತನಾಡುತ್ತಿದ್ದೇನೆ. ನಾವು ಸತ್ಯದಿಂದ ಇದ್ದೇವೆ. ನಮ್ಮ ಹೊಳಪು ಹಾಗೇ ಉಳಿದಿದೆ. ಇದಕ್ಕೆ ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುತ್ತೇವೆ. ಯಾವತ್ತೂ ಕೆಟ್ಟದ್ದನ್ನು ಮಾಡುವುದಿಲ್ಲ ಎಂದು ಹೇಳಿದರು.