HomeLatest NewsBIG NEWS: ಮಹೇಶ್ ತಿಮರೋಡಿ ಮನೆಗೆ ಮೂರನೇ ನೋಟಿಸ್ ಅಂಟಿಸಿದ ಪೊಲೀಸರು

BIG NEWS: ಮಹೇಶ್ ತಿಮರೋಡಿ ಮನೆಗೆ ಮೂರನೇ ನೋಟಿಸ್ ಅಂಟಿಸಿದ ಪೊಲೀಸರು

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿ ಮನೆಗೆ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದಾರೆ.

ಮಹೇಶ್ ತಿಮರೋಡಿ ನಿವಾಸದಲ್ಲಿ ಎರಡು ತಲ್ವಾರ್, ಒಂದು ಬಂದೂಕು ಪತ್ತೆಯಾಗಿತ್ತು. ಬೆಂಳ್ತಂಗಡಿ ಠಾಣೆ ಪೊಲೀಸರು ಮಹೇಶ ತಿಮರೋಡಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರು. ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ.

ಇದೀಗ ಮಹೇಶ್ ತಿಮರೋಡಿಗೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ. ಮಹೇಶ್ ತಿಮರೋಡಿ ಮನೆಗೆ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದು, ಸೆಪ್ಟೆಂಬರ್ 29ರಂದು ವಿಚಾರಣೆಗೆ ಬೆಳ್ತಂಗಡಿ ಠಾಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದು, ಸೆ.27ರಂದು ಮಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular