ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಅತಿಥಿ ಉಪನ್ಯಾಸಕರ ನೇಮಕ ವಿಚಾರವಗಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದ್ದು, ಅನಗತ್ಯ ವಿಳಂಬ ಮಾಡುತ್ತಿದೆ. ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಕಾರ್ಯಕರ್ತರು, ಅತಿಥಿ ಉಪನ್ಯಾಸಕ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನ ಸಂಜಯ್ ನಗರದಲ್ಲಿರುವ ಉನ್ನತ ಶಿಕ್ಷಣ ಸಚಿವ ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರನ್ನು ತಡೆದಿದ್ದಾರೆ.
ಮತ್ತೊಂದೆಡೆ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು, ಸರ್ಕಾರದ ವಿಳಂಬ ನೀತಿಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.