ನವದೆಹಲಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಬಾಬಾ ಎಂದೇ ಖ್ಯಾತಿ ಪಡೆದಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ದೆಹಲಿ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಎಫ್ ಐ ಆರ್ ನಲ್ಲಿ ಕಿರುಕುಳಕ್ಕೆ ಒಳಗಾದ ಯುವತಿಯರ ಹೇಳಿಕೆ ಉಲ್ಲೇಖವಾಗಿದೆ ಇಡಬ್ಲ್ಯು ಎಸ್ ಕೋಟಾದಡಿ ಬಂದ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಸ್ಕಾಲರ್ ಶಿಪ್ ಕೊಡಿಸುವ, ಅಂಕಗಳನ್ನು ಕಟ್ ಮಾಡುವುದಾಗಿ, ಮಾರ್ಕ್ಸ್ ಕಾರ್ಡ್ ಕೊಡುವುದಿಲ್ಲ ಎಂದು ಬೆದರಿಸಿ ಕಿರುಕುಳ ನೀಡುತ್ತಿದ್ದರು. ವಿದೇಶ ಪ್ರವಾಸದ ಆಫರ್ ನೀಡಿ ಕೂಡ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಕಾಲೇಜಿನ ಡೀನ್ ಕೂಡ ಸ್ವಾಮೀಜಿಗೆ ಸಾಥ್ ನೀಡುತ್ತಿದ್ದರು. ಡೀನ್ ಗೆ ದೂರು ನೀಡಲು ಹೋದರೆ ಮೆಸೇಜ್ ಪ್ರತಿಕ್ರಿಯೆ ನೀಡುವಂತೆ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ.
ಬಂಧನ ಭೀತಿಯಲ್ಲಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್, ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಜಾಮೀನು ಅರ್ಜಿ ವಜಾಗೊಳಿಸಿದೆ.