BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ 22-09-2025 ರಿಂದ ಪ್ರಾರಂಭಿಸಿದ್ದು, ಪ್ರಗತಿಯಲ್ಲಿದೆ.

ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲವೆಂದು ಸ್ಪಷ್ಟಿಕರಿಸಲಾಗಿದೆಯೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ 22, 2025 ರಿಂದ ಪ್ರಾರಂಭವಾಗಿದೆ ಮತ್ತು ಅದು ಪ್ರಗತಿಯಲ್ಲಿದೆ. ಸಮೀಕ್ಷೆಯು ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಒಳಗೊಳ್ಳಲು ಉದ್ದೇಶಿಸಿದ್ದರೂ, ನಾಗರಿಕರು/ಮನೆಯವರು ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ ಮತ್ತು ಮಾಹಿತಿಯನ್ನು ಬಹಿರಂಗಪಡಿಸಲು ಅವರ ಕಡೆಯಿಂದ ಯಾವುದೇ ಬಲವಂತವಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read