HomeJobsಪಿಎಸ್ಐ, ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ

ಪಿಎಸ್ಐ, ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಪಿಎಸ್ಐ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಒಂದು ಬಾರಿ ವಯೋಮಿತಿ ಸಡಿಲಿಕೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.

 ಈ ಬಗ್ಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪೊಲೀಸ್ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ದಸರಾ ಗಿಫ್ಟ್ ನೀಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್ಐ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ವಯೋಮಿತಿ ಸಡಿಲಿಕೆಗೆ ಸಂಬಂಧಿಸಿದಂತೆ ಒತ್ತಾಯಿಸಲಾಗಿತ್ತು. ಬೇಡಿಕೆಗೆ ಅಧಿಕೃತವಾಗಿ ಅನುಮೋದನೆ ನೀಡಲಾಗಿದ್ದು, ವಯೋಮಿತಿ ಸಡಿಲಿಕೆಗೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಸ್ಐ ಹುದ್ದೆಗಳಿಗೆ ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ರಿಂದ 32 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 28 ರಿಂದ 30 ವರ್ಷಕ್ಕೆ ಹೆಚ್ಚಳ ಮಾಡಲಾಗುವುದು. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27ರಿಂದ 30 ವರ್ಷಕ್ಕೆ, ಇತರೆ ವರ್ಗದವರಿಗೆ 25 ರಿಂದ 27 ವರ್ಷಕ್ಕೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular